ಈ ಕಿರುಚಿತ್ರ ಭಾರತದಲ್ಲಿ ನಿಷೇಧಕ್ಕೊಳಗಾಗಿದೆ.
ಅದರ ಅರ್ಥ ಈ ಚಿತ್ರದಲ್ಲಿ ಏನೋ ಕಠೋರವಾದ ಸತ್ಯವಿರಬೇಕು. ಅಥವಾ ಸಮಾಜದ ಕರಾಳ ಮುಖವನ್ನೂ ಹಸಿಹಸಿಯಾಗಿಯೇ ತೋರಿಸಿರಬಹುದು.ಯಾವ ಬೆದರಿಕೆಗೆ, ಆಮಿಷಕ್ಕೆ ಒಳಗಾಗದೆ ನಿರ್ದೇಶಕ ತನಗನಿಸಿದ್ದನ್ನು ಚಿತ್ರೀಕರಿಸಿರಬೇಕು.
ಹೌದು ಇದೆಲ್ಲವೂ ಈ ಕಿರುಚಿತ್ರದ ಮಟ್ಟಿಗೆ ಸತ್ಯ.
ಈ ಕಿರುಚಿತ್ರವನ್ನು ನೋಡಿದ ಸ್ಲಂ ಡಾಗ್ ಖ್ಯಾತಿಯ ನಿರ್ದೇಶಕ ಡ್ಯಾನಿ ಬೊಯ್ಲ್ ಮೆಚ್ಚಿದ್ದಲ್ಲದೆ ತಮ್ಮ ಚಿತ್ರ ಸ್ಲಂ ಡಾಗ್ ಮಿಲ್ಲೆನಿಯರ್ ನ ಬ್ಲೂ ರೇ ಡಿವಿಡಿಯಲ್ಲಿ ಹೆಚ್ಚುವರಿ ಅಡಕವಾಗಿ ಈ ಕಿರುಚಿತ್ರವನ್ನು ಸೇರಿಸಿದ್ದರು.
ಅದರರ್ಥ ಈ ಕಿರು ಚಿತ್ರ ಅತ್ಯುತ್ತಮವಾಗಿದೆ ಎಂಬರ್ಥವಿರಬೇಕು.
ಹೌದು. ಮಾ೦ಜ್ಹಾ ಮರಾಠಿ ಭಾಷೆಯಲ್ಲಿರುವ ಕಿರುಚಿತ್ರ. ಕಪ್ಪುಬಿಳುಪು ವರ್ಣದ ಈ ಚಿತ್ರದ ಕಥೆ, ನಿರೂಪಣೆ ಪ್ರೇಕ್ಷಕರನ್ನು ಕೆಲಕಾಲ ದಿಗ್ಭ್ರಾಂತರನ್ನಾಗಿಸದಿರದು. ಮುಂಬೈನಗರದ ಸ್ಲಮ್ಮಿನ ಇನ್ನೊಂದು ಕರಾಳ ಮುಖವನ್ನೂ ತೆರೆದಿಡುವ ಈ ಚಿತ್ರದ ನಿರ್ದೇಶಕ ರಾಹಿ ಅನಿಲ್ ಬರವೆ.
ಮುಂಬೈ ಮಹಾನಗರಿ ರಂಕಾನ ತಾಯಿಯನ್ನು ವೇಶ್ಯಯನ್ನಾಗಿ ಮಾಡಿರುತ್ತದೆ. ತಂದೆಯನ್ನು ಕಿತ್ತುಕೊಂಡಿರುತ್ತದೆ . ಹಾಗಾಗಿ ರಂಕಾನಿಗಿರುವವಳು ಚಿಕ್ಕ ತಂಗಿ ಮಾತ್ರ. ಗಾಳಿಪಟದ ದಾರವನ್ನು ತಯಾರಿಸುವೆಡೆ ಕೆಲಸ ಮಾಡುವ ರಂಕಾನಿಗೆ ಒಬ್ಬ ಮತಿಗೆಟ್ಟ ಪೋಲೀಸ್ ಅಧಿಕಾರಿ ಪರಿಚಯವಾಗುತ್ತಾನೆ . ಬಾಲ್ಯದಲ್ಲಿ ತಂದೆಯಿಂದಲೇ ನಿರಂತರ ಅತ್ಯಾಚಾರಕ್ಕೊಳಗಾಗಿದ್ದ ಆತ ರಂಕಾಳ ಪುಟ್ಟ ತಂಗಿಯನ್ನು ಲೈಂಗಿಕವಾಗಿ ಆಘಾತಗೊಳಿಸುತ್ತಾನೆ ಮುಂದೆ ರಂಕಾ ಹೇಗೆ ಆ ಪೈಶಾಚಿಕ ಮನೋಭಾವದ ಪೋಲೀಸ್ ಮೇಲೆ ಸೇಡು ತೀರಿಸಿಕೊಳ್ಳುತ್ತಾನೆ ಎಂಬುದೇ ಕಥೆ.
ಚಿತ್ರದ ಹಿನ್ನೆಲೆ ಸಂಗೀತ, ನೇರವಂತಿಕೆಯ ಸಂಭಾಷಣೆ ನಮ್ಮನ್ನು ಕಾಡದಿರದು .41 ನಿಮಿಷಗಳಷ್ಟು ಉದ್ದವಿರುವ ಈ ಕಿರುಚಿತ್ರವನ್ನೊಮ್ಮೆ ಅವಶ್ಯ ನೋಡಿ.
ಓದಿ ಮೆಚ್ಚಿದ್ದು: ಪ್ರಮೋದ ರ ಬ್ಲಾಗ್ CIPHERS SPACE ನಲ್ಲಿನ ಮೂರ್ಖರ , ಮೂರ್ಖರಿಂದ ಮೂರ್ಖರಿಗಾಗಿ ಈವತ್ತಿನ ಮಾಧ್ಯಮಗಳ ಟಿ .ಆರ್.ಪಿ. ಸರ್ಕಸ್ಸಿನ ಬಗ್ಗೆ ವ್ಯಂಗ್ಯವಾಗಿ ತಿಳಿಸುವ ಅರ್ಥ ಗರ್ಭಿತ ಲೇಖನ. ಓದು ಓದುತ್ತಾ ಹೌದಲ್ಲ ಎನಿಸುವ ಲೇಖನ ಸಕತ್ತು ಮಜಾ ಕೊಡುತ್ತದೆ. ನೀವು ಓದಿ.

Vety interesting....
ReplyDeleteಅನುರಾಗ್ ಕಶ್ಯಪ್ ರೆಕಮ೦ಡೇಷನ್ ಅ೦ದ್ರೆ ಮಾಂಜ್ಹಾ ಚಿತ್ರ ಚೆನ್ನಾಗಿರಬೇಕು. :) ನನ್ನ ಬ್ಲಾಗಿನ ಕೊ೦ಡಿ ಹಾಕಿ ಮಾರ್ಕೆಟಿ೦ಗ್ ಮಾಡಿದ್ದಕ್ಕೆ ತು೦ಬಾ ಧನ್ಯವಾದಗಳು ಸರ್ :)
ReplyDeleteಕಿರು ಚಿತ್ರ ನೋಡ್ಬೇಕು ನಿಮ್ಮ ಬರಹ ಮತ್ತು ಪರಿಚಯಿಸಿದ ಬ್ಲಾಗು ಚೆನ್ನಾಗಿದೆ
ReplyDeleteಧನ್ಯವಾದಗಳು....
Deleteತುಂಬಾ ಅಧ್ಭುತವಾಗಿದೆ ಚಿತ್ರ ,,, ಸಮಾಜದ ಕಠೊರ ಸತ್ಯ !! ನಿಮ್ಮ ಬರಹ ಓದಿದ ಮೇಲೇನೆ ನೋಡಿದ್ದು ! ತುಂಬಾ ಧನ್ಯವಾದಗಳು ...
ReplyDelete